HEALTH TIPS

ಹೈದರಾಬಾದ್‌ನಲ್ಲಿ ಅಗ್ನಿ ಅವಘಡ: 11 ಮಂದಿ ಕಾರ್ಮಿಕರ ಸಜೀವ ದಹನ

    ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಭೋಯಿಗುಡಾದಲ್ಲಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 11 ಕಾರ್ಮಿಕರು ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ.

     ಮೃತ ಕಾರ್ಮಿಕರೆಲ್ಲರೂ ಬಿಹಾರದ ನಿವಾಸಿಗಳಾಗಿದ್ದು, ಇಲ್ಲಿನ ಜಂಕ್ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

     ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಉಪಸ್ಥಿತರಿದ್ದ ಹೈದರಾಬಾದ್ ಕೇಂದ್ರ ವಲಯ ಡಿಸಿಪಿ, ಎಲ್ಲಾ 11 ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದರು.

     ಬೆಳ್ಳಂಬೆಳಗ್ಗೆ ಸಿಕಂದರಾಬಾದ್​ನಲ್ಲಿ ಟಿಂಬರ್​​ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆ ಮತ್ತು ಬಿದಿರುಗಳು ಇರುವುದರಿಂದ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಕೂಡಲೇ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾರಂಭಿಸಿತು. ಆದರೆ ಅಷ್ಟೊತ್ತಿಗಾಗಲೇ 11 ಜನರು ಸಜೀವ ದಹನಗೊಂಡಿದ್ದರು. ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

      ಸದ್ಯ ಬೆಂಕಿ ಹತೋಟಿಗೆ ಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries