HEALTH TIPS

ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ

             ಶಾಹೀದ್ ಭಗತ್ ಸಿಂಗ್ ನಗರ್: ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಎಎಪಿ ಪಕ್ಷದ ಭಗವಂತ್‌ ಮಾನ್ ಅವರು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹುಟ್ಟೂರಾದ ಖಟ್ಕರ್ ಕಲಾನ್​​ನಲ್ಲಿ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

                ಸದ್ಯ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಿತು.

             ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್​ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್​ ಯಾದವ್​,  ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಸೇರಿ ಅನೇಕರು ಶುಭಹಾರೈಸಿದರು.

             ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ಪಂಜಾಬ್​​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಅಭಿನಂದನೆಗಳು. ಅವರ ಸಮರ್ಥ ನಾಯಕತ್ವದಲ್ಲಿ ಪಂಜಾಬ್​​ ಪ್ರಗತಿ ಕಾಣಲಿ. ಅಲ್ಲಿ ಸೋದರತ್ವ ಬೆಳೆಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries