HEALTH TIPS

ಐಪಿಎಲ್ 2022: 61 ರನ್ ಗಳಿಂದ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಗೆದ್ದ ರಾಜಸ್ಥಾನ ರಾಯಲ್ಸ್

           ಮುಂಬಯಿ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ 2022 ಆವೃತ್ತಿಯ ಐದನೇ ಪಂದ್ಯದಲ್ಲಿ  ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 61 ರನ್ ಗಳ ಅಂತರದಿಂದ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ.

             ಟಾಸ್ ಸೋತ್ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್  ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್ ಕಲೆಹಾಕಿತು. ರಾಜಸ್ಥಾನ ರಾಯಲ್ಸ್ ಪರ ಸಂಜು ಸ್ಯಾಮ್ಸನ್ 55, ದೇವದತ್ ಪಡಿಕ್ಕಲ್ 41 ಹಾಗೂ ಜೋಸ್ ಬಟ್ಲರ್ 35 ರನ್ ಗಳಿಸಿದರು. ಸನ್ ರೈಸರ್ಸ್ ಪರ ಉಮ್ರಾನ್ ಮಲಿಕ್ ಮತ್ತು ತಂಗರಸು ನಟರಾಜನ್ ತಲಾ 2, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.


               ರಾಜಸ್ಥಾನ ರಾಯಲ್ಸ್ ನೀಡಿದ 210 ರನ್ ಗಳ ಗುರಿ ಬೆನ್ನಟ್ಟಿದ್ದ ಹೈದ್ರಾಬಾದ್ ಸನ್ ರೈಸರ್ಸ್,  ಐಡೆನ್ ಮಾರ್ಕ್ ರಮ್ 57, ವಾಷಿಂಗ್ಟನ್ ಸುಂದರ್ 40 ಮತ್ತು ರೊಮಾರಿಯೋ ಶೆಫರ್ಡ್ ಅವರ 24 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ರಾಜಸ್ಥಾನ ರಾಯಲ್ಸ್  61 ರನ್ ಗಳಿಂದ ಗೆದ್ದು ಬೀಗಿತು.

           ರಾಜಸ್ಥಾನ ರಾಯಲ್ಸ್ ಪರ ಚಹಾಲ್ 3 , ಪ್ರಸಿದ್ದ್ ಕೃಷ್ಣ 2, ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರು.  ರಾಜಸ್ಥಾನ ರಾಯಲ್ಸ್ ಆಟಗಾರ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries