HEALTH TIPS

ಮಹಾರಾಷ್ಟ್ರದಲ್ಲಿ ಏಪ್ರಿಲ್ 2 ರಿಂದ ಎಲ್ಲಾ ಕೋವಿಡ್ ನಿರ್ಬಂಧ ತೆರವು, ಮಾಸ್ಕ್ ಕಡ್ಡಾಯವಲ್ಲ

    ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸುಮಾರು ಎರಡು ವರ್ಷಗಳ ನಂತರ ರಾಜ್ಯದಾದ್ಯಂತ ಮಾಸ್ಕ್ ಕಡ್ಡಾಯ ನಿಯಮ ಸೇರಿದಂತೆ ಎಲ್ಲಾ ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಲು ನಿರ್ಧರಿಸಿದೆ. ಇದರೊಂದಿಗೆ ಮಹಾರಾಷ್ಟ್ರ ಮಾಸ್ಕ್ ಕಡ್ಡಾಯ ನಿಯಮ ತೆಗೆದುಹಾಕಿದ ದೇಶದ ಮೊದಲ ರಾಜ್ಯವಾಗಿದೆ.

    ಏಪ್ರಿಲ್ 2 ರಿಂದ ರಾಜ್ಯದಲ್ಲಿ ಮಾಸ್ಕ್ ಸೇರಿದಂತೆ ಎಲ್ಲಾ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಗುರುವಾರ ಹೇಳಿದೆ. ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಕುಸಿತ ಮತ್ತು ಕೇಂದ್ರವು ವಿಪತ್ತು ನಿರ್ವಹಣಾ ಕಾಯಿದೆಯ ನಿಬಂಧನೆಗಳನ್ನು ಹಿಂತೆಗೆದುಕೊಳ್ಳುವ ಮಧ್ಯೆ ಈ ಸಡಿಲಿಕೆ ಘೋಷಿಸಲಾಗಿದೆ.

    ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

    ಏಪ್ರಿಲ್ 2 ರಿಂದಗುಡಿ ಪಾಡ್ವಾ), ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯನ್ನು ಹಿಂಪಡೆಯಲು ಸಂಪುಟ ನಿರ್ಧರಿಸಿದೆ. ಏಪ್ರಿಲ್ 2 ರಿಂದ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸಬಹುದು ಎಂದು ಸಂಪುಟ ಸಭೆ ಬಳಿಕ ರಾಜೇಶ್ ಟೋಪೆ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries