HEALTH TIPS

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3 ರಷ್ಟು ಹೆಚ್ಚಳ

    ನವದೆಹಲಿ: ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಿದ್ದು, 1.16 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.

      ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ಡಿ ಶೇ. 3 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಮೂಲ ವೇತನದ ಶೇ.31 ರಷ್ಟಿದ್ದ ತುಟ್ಟಿ ಭತ್ಯೆ ಈಗ ಶೇ.34 ಕ್ಕೆ ಏರಿಕೆ ಮಾಡಲಾಗಿದೆ.

     ಕ್ಯಾಬಿನೆಟ್ ಅಧಿಸೂಚನೆಯಂತೆ ಮೂಲ ವೇತನ ಎಂಬ ಪದವು 7ನೇ ವೇತನ ಆಯೋಗದ ಮ್ಯಾಟ್ರಿಕ್ಸ್ ಪ್ರಕಾರ ಪಾವತಿಸುವ ವೇತನ ಎಂದರ್ಥ ಮತ್ತು ವಿಶೇಷ ವೇತನದಂತಹ ಯಾವುದೇ ರೀತಿಯ ವೇತನವನ್ನು ಒಳಗೊಂಡಿಲ್ಲ. 

     ಶೇ. 3ರಷ್ಟು ತುಟ್ಟಿಭತ್ಯೆ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 9,544.50 ಕೋಟಿ ರೂ. ಹೊರೆಯಾಗಲಿದೆ. ಆದರೆ ಇದರಿಂದ ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. 

      2021ರ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಮೂಲ‌ವೇತನದ ಶೇಕಡಾ 31ಕ್ಕೆ ಹೆಚ್ಚಿಸಲಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries