HEALTH TIPS

6 ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಬೋಧನೆ: ಗುಜರಾತ್‌ ಸರ್ಕಾರ ಆದೇಶ

      ಗಾಂಧಿನಗರ: 2022-23ನೇ ಸಾಲಿನ ಶೈಕ್ಷಣಿಕ.    ವರ್ಷದಿಂದ ರಾಜ್ಯಾದ್ಯಂತ 6 ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮವಾಗಿ ಭಗವದ್ಗೀತೆಯನ್ನು ಸೇರಿಸಲಾಗುವುದು ಎಂದು ಗುಜರಾತ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದೆ.

      ಗುಜರಾತ್ ಶಿಕ್ಷಣ ಸಚಿವ ಜಿತು ವಘಾನಿ ಅವರು ಬಜೆಟ್‌ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಧಾನಸಭೆಗೆ ಈ ವಿಷಯ ತಿಳಿಸಿದ್ದಾರೆ.

      ರಾಜ್ಯದ ಎಲ್ಲಾ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯ ಮಕ್ಕಳಿಗೆ ಭಗವದ್ಗೀತೆಯ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲಾಗುವುದು ಎಂದು ಜಿತು ವಘಾನಿ ಹೇಳಿದ್ದಾರೆ.

     2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಯನ್ನು ಅಳವಡಿಸಲು ಮೊದಲ ಹಂತದಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳನ್ನು ತರಗತಿಯಲ್ಲಿ ತಿಳುವಳಿಕೆ ಮತ್ತು ಆಸಕ್ತಿಗೆ ಅನುಗುಣವಾಗಿ ಪರಿಚಯಿಸಲಾಗುತ್ತದೆ ಎಂದು ಗುಜರಾತ್‌ನ ಶಿಕ್ಷಣ ಸಚಿವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries