ತಿರುವನಂತಪುರ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 27 ರವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಈ ಸಮಯದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಜಾಗರೂಕ ಸೂಚನೆಗಳನ್ನು ನೀಡಿದೆ.
ಇದೇ ವೇಳೆ ಪಾಲಕ್ಕಾಡ್ ನ ಕಲ್ಲಡಿಕೋಡ್ ಗುಡ್ಡಗಾಡು ಪ್ರದೇಶದಲ್ಲಿ ಮಳೆ ಗಾಳಿಗೆ ರಬ್ಬರ್ ಮರಗಳು ಉರುಳಿ ಬಿದ್ದಿವೆ. ಹಲವೆಡೆ ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾರುತಂಕೋಡ್-ಚೆಂಪಂತಿಟ್ಟ ರಸ್ತೆಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ.
ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಇಂದು ಮಧ್ಯಾಹ್ನ ತುಂತು ಮಳೆಯಾಗಿದ್ದು ಮೋಡಕಲವಿದ ವಾತಾವರಣ ಕಂಡುಬಂದಿತ್ತು.


