ನವದೆಹಲಿ: ಹಿಜಾಬ್ ವಿವಾದದ ಬಗ್ಗೆ ತುರ್ತು ವಿಚಾರಣೆ ನಡೆಸಲು ದಿನಾಂಕ ನಿಗದಿಗೊಳಿಸುವುದಕ್ಕೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
0
samarasasudhi
ಮಾರ್ಚ್ 24, 2022
ನವದೆಹಲಿ: ಹಿಜಾಬ್ ವಿವಾದದ ಬಗ್ಗೆ ತುರ್ತು ವಿಚಾರಣೆ ನಡೆಸಲು ದಿನಾಂಕ ನಿಗದಿಗೊಳಿಸುವುದಕ್ಕೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಮಾರ್ಚ್ 16 ರಂದು ಕರ್ನಾಟಕ ಹೈಕೋರ್ಟ್ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು.
ವಿದ್ಯಾರ್ಥಿನಿಯರ ಪರವಾಗಿ ವಾದಿಸಲು ಸಜ್ಜಾಗಿದ್ದ ವಕೀಲ ದೇವದತ್ತ ಕಾಮತ್ ಅವರು ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇಂದು ಆ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಪ್ರೀಂಕೋರ್ಟ್, ತುರ್ತು ವಿಚಾರಣೆ ನಡೆಸಲು ದಿನಾಂಕ ನಿಗದಿಗೊಳಿಸಲು ಸಾಧ್ಯವಿಲ್ಲ ಎಂದಿದೆ.
'ಇದಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಈ ವಿಷಯವನ್ನು ಅತಿರಂಜಿತಗೊಳಿಸಬೇಡಿ' ಎಂದು ಸಿಜೆಐ ವಕೀಲರಿಗೆ ಹೇಳಿರುವುದಾಗಿ ವರದಿಯಾಗಿದೆ.