ನವದೆಹಲಿ: ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಕಾನೂನನ್ನು ಜಾರಿಗೊಳಿಸುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಗೆ ಶುಕ್ರವಾರ ತಿಳಿಸಿದರು.
0
samarasasudhi
ಮಾರ್ಚ್ 25, 2022
ನವದೆಹಲಿ: ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಕಾನೂನನ್ನು ಜಾರಿಗೊಳಿಸುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಗೆ ಶುಕ್ರವಾರ ತಿಳಿಸಿದರು.
ಕೇಂದ್ರವು ಕಡ್ಡಾಯ ಮತದಾನ ಕಾನೂನು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಹಾಗೂ ಸಂಸ್ಥೆಗಳ ಸಲಹೆ ಕೇಳಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರದ ಸವಲತ್ತು ಮತ್ತು ಯೋಜನೆಗಳ ಫಲಾನುಭವಿಗಳು ಆಗಬೇಕಾದರೆ ಮತದಾನ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.