ನವದೆಹಲಿ: ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (ಸಿಯುಇಟಿ) ಅಂಕಗಳನ್ನು ಪರಿಗಣಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಲಹೆ ಮಾಡಿದೆ.
0
samarasasudhi
ಮಾರ್ಚ್ 30, 2022
ನವದೆಹಲಿ: ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (ಸಿಯುಇಟಿ) ಅಂಕಗಳನ್ನು ಪರಿಗಣಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಲಹೆ ಮಾಡಿದೆ.
ಈ ಸಂಬಂಧ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೆರವು ಪಡೆಯುವ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಅವರು ಪತ್ರ ಬರೆಯಲಿದ್ದಾರೆ.
'ಶೀಘ್ರ ಪತ್ರ ಬರೆಯುತ್ತೇನೆ. ಅಲ್ಲದೆ, ಸರ್ಕಾರದ ನೆರವು ಪಡೆಯುತ್ತಿರುವ, ಎಲ್ಲ ರಾಜ್ಯಗಳ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆಗೆ ತಾವು ಚರ್ಚಿಸಲಿದ್ದು, ಪರೀಕ್ಷೆ ಕುರಿತಂತೆ ಅವರ ಪ್ರಶ್ನೆಗಳಿಗೆ ಉತ್ತರಿಸಲಾಗುವುದು' ಎಂದು ತಿಳಿಸಿದರು.
ಕುಲಪತಿಗಳ ಭೇಟಿ ಭಾಗವಾಗಿ ಮೊದಲ ಹಂತದಲ್ಲಿ ಗುಜರಾತ್‌ನ ವಿವಿಧ 25 ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆಗೆ ಅವರು ಚರ್ಚಿಸಿದರು. ನಂತರದ ಹಂತದಲ್ಲಿ ಕರ್ನಾಟಕ ಮತ್ತು ಅಸ್ಸಾಂನ ವಿವಿಧ ವಿ.ವಿ.ಗಳ ಕುಲಪತಿಗಳ ಜೊತೆ ಚರ್ಚೆ ನಡೆಯಲಿದೆ ಎಂದರು.