HEALTH TIPS

ಹಿಜಾಬ್ ನಿಷೇಧ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿನಿಯರಿಂದ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ!

             ನವದೆಹಲಿ: ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಕುರಾನ್ ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಪಡಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ. 

             ವಿದ್ಯಾರ್ಥಿನಿ ನಿಭಾ ನಾಜ್ ಪರವಾಗಿ ವಕೀಲ ಅನಾಸ್ ತನ್ವೀರ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. 

              ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಜೆ.ಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ.

                             ತೀರ್ಪಿನಿ ಅಂಶಗಳು

              ಆರ್ಟಿಕಲ್ 19(1) (ಎ) (ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಕಲಂ 21 (ಗೌಪ್ಯತೆ) ಅಡಿಯಲ್ಲಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಶಾಲಾ ಸಮವಸ್ತ್ರವನ್ನು ಕಾನೂನು ಬದ್ಧವಾಗಿ ಸರ್ಕಾರ ಆದೇಶ ಜಾರಿಗೆ ತಂದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿಗೆ ಉತ್ತರಿಸಿರುವ ನ್ಯಾಯಾಲಯ, ಸರ್ಕಾರ ಸೂಚಿಸುವ ಸಮವಸ್ತ್ರವು ಸಮಂಜಸವಾದ ನಿರ್ಬಂಧವಾಗಿದೆ. ಸಾಂವಿಧಾನಿಕವಾಗಿ ಅನುಮತಿಸಲಾಗಿದೆ ಇದನ್ನು ವಿದ್ಯಾರ್ಥಿಗಳು ಆಕ್ಷೇಪಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

              ಫೆಬ್ರವರಿ 5ರಂದು ಕರ್ನಾಟಕ ಸರ್ಕಾರ ಸಮವಸ್ತ್ರ ಕುರಿತು ಹೊರಡಿಸಿರುವ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಜೆ ಎಂ ಖಾಜಿ ನೇತೃತ್ವದ ತ್ರಿಸದಸ್ಯ ಪೀಠ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಿದರು. ಅರ್ಹತೆ ಇಲ್ಲದ ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಾಲಯ, ಸಮವಸ್ತ್ರವನ್ನು ಸೂಚಿಸುವ ಆದೇಶವನ್ನು ಹೊರಡಿಸುವ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದು ಹೇಳಿತು. ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಕಾಲೇಜಿನ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ನಿರ್ದೇಶನ ನೀಡಲು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

               ಉಡುಪಿಯ ಸರ್ಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜು ಮತ್ತು ಹಲವರು ಸರ್ಕಾರ ಆದೇಶದ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಹಾಕಿದ್ದರು. ಪರ್ದಾ ಅಥವಾ ಬುರ್ಖಾ ಕಡ್ಡಾಯವಲ್ಲ. ಆದರೆ ತಲೆ ಸ್ಕಾರ್ಫ್ ಅಥವಾ ಹಿಜಾಬ್ ಇಸ್ಲಾಮಿನಲ್ಲಿ ಅತ್ಯಗತ್ಯ ಭಾಗವಾಗಿದೆ ಮತ್ತು ಇಸ್ಲಾಮಿಕ್ ಶ್ಲೋಕಗಳು ಮತ್ತು ಧರ್ಮಗ್ರಂಥಗಳ ಮೂಲಕ ಕೇರಳ ಹೈಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರ ವಕೀಲರು ವಾದ ಮಂಡಿಸಿದರು. ಅದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರಿ ಪರ, ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಸಂವಿಧಾನದ 25 ನೇ ವಿಧಿಯಡಿಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂಬ ವಾದಗಳಿಗೆ ಬೆಂಬಲವಾಗಿ ಶಿರೂರು ಮಠದಿಂದ ಪ್ರಾರಂಭಿಸಿ ಶಬರಿಮಲೆ ಪ್ರಕರಣಗಳವರೆಗೆ ಹಲವಾರು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ, ಅರ್ಜಿದಾರರು-ವಿದ್ಯಾರ್ಥಿಗಳು ತಮ್ಮ ಹಕ್ಕನ್ನು ದೃಢೀಕರಿಸಲು ರಾಜ್ಯ ಸರ್ಕಾರ ವಾದಿಸಿತು. 

             ಕಳೆದ ಫೆಬ್ರವರಿ 10ರಂದು ಮಧ್ಯಂತರ ತೀರ್ಪು ನೀಡಿದ ಹೈಕೋರ್ಟ್ ಪೂರ್ಣ ಪ್ರಮಾಣ ಪೀಠ, ಎಲ್ಲಾ ವಿದ್ಯಾರ್ಥಿಗಳು ತಮ್ಮ ಧರ್ಮ, ಸಂಪ್ರದಾಯ ಬದಿಗಿಟ್ಟು ಧಾರ್ಮಿಕ ಸಂಕೇತ ಬಿಂಬಿಸುವ ಬಟ್ಟೆಗಳನ್ನು ಧರಿಸಿಕೊಂಡು ತರಗತಿಯೊಳಗೆ ಹೋಗಬಾರದು ಎಂದು ಆದೇಶ ಕೊಟ್ಟಿತ್ತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries