HEALTH TIPS

ಕೋವಿಡ್‌ ಲಸಿಕೆ ವ್ಯರ್ಥವಾಗದಂತೆ ಕ್ರಮ: ಕೇಂದ್ರ ಸೂಚನೆ

          ನವದೆಹಲಿ: ಕೋವಿಡ್‌ ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

           ಶೀಘ್ರವೇ ಅವಧಿ ಮುಗಿಯಲಿರುವ ಲಸಿಕೆಯ ವಯಲ್‌ಗಳು ಖಾಸಗಿ ಆಸ್ಪತ್ರೆಗಳಲ್ಲಿ ಇದ್ದಲ್ಲಿ, ಅವುಗಳನ್ನು ಪಡೆದು, ಸರ್ಕಾರಿ ಆಸ್ಪತ್ರೆ/ಉಗ್ರಾಣಗಳಲ್ಲಿ ದಾಸ್ತಾನಿರುವ ದೀರ್ಘ ಅವಧಿಯ ವಯಲ್‌ಗಳನ್ನು ಆ ಆಸ್ಪತ್ರೆಗಳಿಗೆ ಪೂರೈಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

            ಈ ಕುರಿತು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್ ಅವರು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. 'ಅವಧಿ ಮುಗಿಯಲಿರುವ ಲಸಿಕಯನ್ನು ಬದಲಾಯಿಸಲು ಆರೋಗ್ಯ ಸಚಿವಾಲಯದ ಆಕ್ಷೇಪವಿಲ್ಲ. ಆದರೆ, ಇಂಥ ಕ್ರಮ ಕೈಗೊಳ್ಳುವ ಮುನ್ನ ಸೂಕ್ತ ಪರಿಶೀಲನೆ ಅಗತ್ಯ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು' ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.

          ಕೋವಿಡ್‌ ಲಸಿಕಾ ಕೇಂದ್ರಗಳು (ಸಿವಿಸಿ) ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯತೆ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದೂ ಸಚಿವಾಲಯ ಸೂಚಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries