ನವದೆಹಲಿ: ದೇಶದ ರಾಷ್ಟ್ರೀಯ ಸಂಪನ್ಮೂಲಗಳ ವೆಚ್ಚ ತಡೆಯುವ ಸಲುವಾಗಿ ಲೋಕಸಭೆ, ರಾಜ್ಯಗಳ ವಿಧಾನಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಬೇಕೆಂದು ಗುರುವಾರ ರಾಜ್ಯಸಭೆಯಲ್ಲಿ ಒತ್ತಾಯಿಸಲಾಗಿದೆ.
0
samarasasudhi
ಮಾರ್ಚ್ 24, 2022
ನವದೆಹಲಿ: ದೇಶದ ರಾಷ್ಟ್ರೀಯ ಸಂಪನ್ಮೂಲಗಳ ವೆಚ್ಚ ತಡೆಯುವ ಸಲುವಾಗಿ ಲೋಕಸಭೆ, ರಾಜ್ಯಗಳ ವಿಧಾನಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಬೇಕೆಂದು ಗುರುವಾರ ರಾಜ್ಯಸಭೆಯಲ್ಲಿ ಒತ್ತಾಯಿಸಲಾಗಿದೆ.
ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ದೇವೇಂದರ್ ಪೌಲ್ ವಾಟ್ಸ್ ಅವರು, 'ದೇಶದಾದ್ಯಂತ ಒಂದಲ್ಲಾ ಒಂದು ರಾಜ್ಯಗಳ ಚುನಾವಣೆ ನಡೆಯುತ್ತಲೇ ಇರುತ್ತದೆ.
ಇದಕ್ಕಾಗಿ ರಾಜ್ಯಗಳ ವಿಧಾನಸಭೆಯ ಅವಧಿಯನ್ನು ವಿಸ್ತರಿಸಬೇಕು ಎಂದು ಸಲಹೆ ನೀಡಿದ ಅವರು, ಈ ಕುರಿತು ಒಂದು ಒಮ್ಮತಕ್ಕೆ ಬರಬೇಕು. ಇದರಿಂದ ಲೋಕಸಭೆ, ವಿಧಾನಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಟ್ಟಿಗೆ ನಡೆಸಬಹುದು ಎಂದು ತಿಳಿಸಿದರು.