HEALTH TIPS

ಭಾರತ್ ಬಂದ್‌, ಬ್ಯಾಂಕ್ ಮುಷ್ಕರ ಹಿನ್ನೆಲೆ; ದೇಶಾದ್ಯಂತ ಎರಡು ದಿನ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

                     ನವದೆಹಲಿ:ಕಾರ್ಮಿಕರ ಮೇಲೆ ಪರಿಣಾಮ ಬೀರುವ ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಹಾಗೂ ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

             ಬ್ಯಾಂಕಿಂಗ್ ವಲಯವು ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಫೇಸ್ಬುಕ್ನಲ್ಲಿ ತಿಳಿಸಿದೆ.

           2022ರ ಮಾರ್ಚ್ 22ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ಸಭೆಯ ನಂತರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಯಿತು.
          ವಿವಿಧ ರಾಜ್ಯಗಳಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಒಕ್ಕೂಟಗಳು ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನವಿರೋಧಿ ಹಾಗೂ ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿದವು.

                ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ.

           ಮಾರ್ಚ್ 28 ಹಾಗೂ 29 ರಂದು ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿಕೆಯೊಂದರಲ್ಲಿ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries