HEALTH TIPS

ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

              ನವದೆಹಲಿ: ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

             ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್' ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರಲ್ಲಿ ಅನಕ್ಷರತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದರು. ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗದ ಹೆಣ್ಣು ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ನಾವು 'ಕನ್ಯಾ ಶಿಕ್ಷಾ ಪ್ರವೇಶ ಉತ್ಸವ'ವನ್ನು ಪ್ರಾರಂಭಿಸಿದ್ದೇವೆ. ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಹೇಳಿದರು.

                ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ. ಇದು ಆರ್ಥಿಕತೆಗೆ ಸಂಬಂಧಿಸಿದ ವಿಷಯವಾದ್ರೂ ಆರ್ಥಿಕತೆಗಿಂತ ಹೆಚ್ಚು.. ಭಾರತದ ಸಾಮರ್ಥ್ಯದ ವಿಷಯವಾಗಿದೆ. ಭಾರತದ ಸಾಮರ್ಥ್ಯವು ವಿಶ್ವದಲ್ಲಿ ಗೋಚರಿಸುತ್ತಿದೆ. ಭಾರತದ ಉತ್ಪನ್ನಗಳು ವಿದೇಶಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿವೆ ಎಂದು ಪ್ರಧಾನಿ ಮೋದಿ ಹೇಳಿದರು.

             ಒಂದು ಕಾಲದಲ್ಲಿ ಭಾರತದಿಂದ ರಫ್ತು ಪ್ರಮಾಣ 100 ಶತಕೋಟಿ, ಕೆಲವೊಮ್ಮೆ 150 ಶತಕೋಟಿ, ಕೆಲವೊಮ್ಮೆ 200 ಶತಕೋಟಿ ಇತ್ತು. ಇಂದು ಭಾರತ 400 ಶತಕೋಟಿ ಡಾಲರ್‌ಗೆ ತಲುಪಿದೆ ಎಂದು ಹೇಳಿದರು. ಅಂದರೆ ಭಾರತದಲ್ಲಿ ತಯಾರಾದ ವಸ್ತುಗಳಿಗೆ ಪ್ರಪಂಚದಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ಎರಡನೆಯದಾಗಿ, ಭಾರತದ ಪೂರೈಕೆಯು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ ಎಂದು ಹೇಳಿದರು.

                ದೇಶದ ಮೂಲೆ ಮೂಲೆಯಿಂದ ಹೊಸ ಉತ್ಪನ್ನಗಳು ಈಗ ವಿದೇಶಕ್ಕೆ ಹೋಗುತ್ತಿವೆ. ಅಸ್ಸಾಂನ ಹೈಲಕಂಡಿಯಿಂದ ಚರ್ಮದ ಉತ್ಪನ್ನ, ಒಸ್ಮಾನಾಬಾದ್‌ನಿಂದ ಕೈಮಗ್ಗದ ಉತ್ಪನ್ನ, ಬಿಜಾಪುರದ ಹಣ್ಣುಗಳು ಮತ್ತು ತರಕಾರಿಗಳು, ಚಂದೌಲಿಯಿಂದ ಕಪ್ಪು ಅಕ್ಕಿ ಸೇರಿದಂತೆ ಹಲವು ವಸ್ತುಗಳು ವಿದೇಶಕ್ಕೆ ರಫ್ತಾಗುತ್ತಿವೆ. ಉತ್ತರಾಖಂಡದ ಹಿಮಾಚಲದ ರಾಗಿಯನ್ನು ಡೆನ್ಮಾರ್ಕ್‌ಗೆ ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದ ಕೃಷ್ಣಾ ಮತ್ತು ಚಿತ್ತೂರು ಜಿಲ್ಲೆಗಳಿಂದ ಬಂಗನಪಲ್ಲಿ ಮತ್ತು ಸುವರ್ಣರೇಖಾ ಮಾವು ದಕ್ಷಿಣ ಕೊರಿಯಾಕ್ಕೆ ರಫ್ತಾಗಿದೆ ಎಂದು ತಿಳಿಸಿದರು.

               ಈಗ ಸಣ್ಣ ಅಂಗಡಿಯವರು ಕೂಡ ತಮ್ಮ ಸರಕುಗಳನ್ನು ಜಿಇಎಂ ಪೋರ್ಟಲ್‌ನಲ್ಲಿ ಸರ್ಕಾರಕ್ಕೆ ಮಾರಾಟ ಮಾಡಬಹುದಾಗಿದ್ದು, ಇದು ಹೊಸ ಭಾರತ ಎಂದು ಪ್ರಧಾನಿ ಮೋದಿ ಹೇಳಿದರು. ಕಳೆದ ಒಂದು ವರ್ಷದಲ್ಲಿ ಜಿಇಎಂ ಪೋರ್ಟಲ್ ಮೂಲಕ ಸರ್ಕಾರ 1 ಲಕ್ಷ ಕೋಟಿ ರೂಪಾಯಿಗೂ ಅಧಿಕ ವೆಚ್ಚದ ವಸ್ತುಗಳನ್ನು ಖರೀದಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದೇಶದ ಮೂಲೆ ಮೂಲೆಯಿಂದ ಸುಮಾರು 1.25 ಲಕ್ಷ ಸಣ್ಣ ಉದ್ಯಮಿಗಳು, ಚಿಲ್ಲರೆ ವ್ಯಾಪಾರಿಗಳು ತಮ್ಮ ಸರಕುಗಳನ್ನು ನೇರವಾಗಿ ಸರ್ಕಾರಕ್ಕೆ ಮಾರಾಟ ಮಾಡಿದ್ದಾರೆ ಎಂದು ತಿಳಿಸಿದರು.

                ಇತ್ತೀಚೆಗೆ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 126 ಹರೆಯದ ಬಾಬಾ ಶಿವಾನಂದ್ ಜೀ ಅವರನ್ನು ಕಂಡು ಬೆರಗಾದೆವು. ಬಾಬಾ ಶಿವಾನಂದ್ ಅವರ ವಯಸ್ಸಿಗಿಂತ ನಾಲ್ಕು ಪಟ್ಟು ಹೆಚ್ಚು ಫಿಟ್ ಆಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಕಮೆಂಟ್ ಮಾಡಿರುವುದಾಗಿ ಪ್ರಧಾನಿ ತಿಳಿಸಿದರು.

               ಆಯುಷ್ ಉದ್ಯಮದ ಮಾರುಕಟ್ಟೆಯೂ ನಿರಂತರವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆರು ವರ್ಷಗಳ ಹಿಂದೆ ಆಯುರ್ವೇದಕ್ಕೆ ಸಂಬಂಧಿಸಿದ ಔಷಧಿಗಳ ಮಾರುಕಟ್ಟೆ ಸುಮಾರು 22 ಸಾವಿರ ಕೋಟಿ ರೂಪಾಯಿ ಇತ್ತು. ಇಂದು ಅದು ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಕೋಟಿ ರೂಪಾಯಿಗಳನ್ನು ತಲುಪುತ್ತಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries