ಮಂಜೇಶ್ವರ: ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಕರ್ನಾಟಕ ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಹಿರಿಯ ವೈದ್ಯ, ಸಾಹಿತಿ, ಕಲಾವಿದ ಡಾ.ರಮಾನಂದ ಬನಾರಿ ಅವರನ್ನು ಭೇಟಿಯಾದರು. ಈ ಸಂದರ್ಭ ಡಾ.ಬನಾರಿ ಅವರು ಕಾಸರಗೋಡಿನ ಸಮಗ್ರ ಭಾಷಾ ಸಂಕಷ್ಟಗಳ ಬಗ್ಗೆ ವಿಸ್ಕøತ ಮಾಹಿತಿ ನೀಡಿದರು. ಜೊತೆಗೆ ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ಕನ್ನಡ ಭವನ ಹಾಗೂ ಡಾ.ಕಯ್ಯಾರ ಕಿಞ್ಞಣ್ಣ ರೈ ಗಳ ಸ್ಮಾರಕ ನಿರ್ಮಾಣಕ್ಕೆ ನಿಧಿ ಅನುಮತಿಸಿದ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಸಂದರ್ಭ ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸಂಘಟಕ ಗೋಪಾಲ ಶೆಟ್ಟಿ ಅರಿಬೈಲು, ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.




