ತಿರುವನಂತಪುರ: ಅಂಗನವಾಡಿ ಮಕ್ಕಳ ಆರೋಗ್ಯ ಸುಧಾರಿಸುವ ಉದ್ದೇಶದಿಂದ ಆಹಾರ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಮಂಡಿಸಿದ ರಾಜ್ಯದ ನೂತನ ಬಜೆಟ್‌ನಲ್ಲಿ ಸಚಿವ ಕೆ.ಎನ್.ಬಾಲಗೋಪಾಲ್ ಈ ಘೋಷಣೆ ಮಾಡಿದ್ದಾರೆ. ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ಮತ್ತು ಹಾಲು ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈ ನಿರ್ಧಾರವು ಕೇರಳದ ಮಕ್ಕಳ ಪೌಷ್ಟಿಕಾಂಶದ ಸ್ಥಿತಿಯನ್ನು ಸುಧಾರಿಸುವ 'ಹಸಿವು ಮುಕ್ತ ಬಾಲ್ಯ' ಯೋಜನೆಯ ಭಾಗವಾಗಿದೆ. ಯೋಜನೆಗೆ 61.5 ಕೋಟಿ ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದರು.




