ಕಾಸರಗೋಡು: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಶಿವಾಲಯಗಳಲ್ಲಿ ಉತ್ಸವಾದಿ ಕಾರ್ಯಕ್ರ ಜರುಗಿತು. ಮಧೂರು ಶ್ರೀ ಮದನಂತೇಶ್ವರ ದೇವಸ್ಥಾನ, ಕೂಡ್ಲು ಗುಡ್ಡೆ ಶ್ರೀ ಮಹಾಲಿಂಗೇಶ್ವರ ದಏವಸ್ಥಾನ, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ, ನಾರಂಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನ, ಪುತ್ತಿಗೆ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ, ಅಬಿಷೇಕ, ಭಜನಾ ಕಾರ್ಯಕ್ರಮ ಜರುಗಿತು. ಪೆರ್ಲ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀದೇವರಿಗೆ ಶತರುದ್ರಾಭಿಷೇಕ ಮತ್ತು ಬಲಿವಾಡುಕೂಟ, ಶ್ರೀ ಮಹಾಲಿಂಗೇಶ್ವರ ಭಜನಾಸಂಘ ವತಿಯಿಂದ ವಿವಿಧ ಭಜನಾ ಮಂಡಳಿಗಳಿಂದ ಶಿವರಾತ್ರಿ ಭಜನೆ ನಡೆಯಿತು.




