HEALTH TIPS

ಉತ್ತರಾಖಂಡ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ

           ಡೆಹ್ರಾಡೂನ್: ಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

              ಡೆಹ್ರಾಡೂನ್ ಪರೇಡ್ ಮೈದಾನದಲ್ಲಿ ಮಾರ್ಚ್ 23ರ ಬುಧವಾರ ಮಧ್ಯಾಹ್ನ 2.30ಕ್ಕೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಯಿತು. ನೂತನ ಮುಖ್ಯಮಂತ್ರಿ ಜೊತೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಎರಡನೇ ಬಾರಿ ರಾಜ್ಯದ ಸಿಎಂ ಆಗಿ ಧಾಮಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರಾಖಂಡ ನಿಯೋಜಿತ ಸಿಎಂ ಯೋಗಿ ಆದಿತ್ಯಾನಾಥ್, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ಭಾಗವಹಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಕೂಡಾ ಉಪಸ್ಥಿತರಿದ್ದರು.

               ಬಿಜೆಪಿ ಜಯಭೇರಿ ಬಾರಿಸಿದ ನಾಲ್ಕು ರಾಜ್ಯಗಳಲ್ಲಿ ಉತ್ತರಾಖಂಡವೂ ಒಂದಾಗಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಪುಷ್ಕರ್‌ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇವರೊಂದಿಗೆ ಸಂಪುಟದ ಸಚಿವರೂ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದು, ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

                                    8 ಕ್ಯಾಬಿನೆಟ್ ಸಚಿವರಿಂದ ಪ್ರಮಾಣ ವಚನ

           ಮುಖ್ಯಮಂತ್ರಿ ಧಾಮಿ ಅವರೊಂದಿಗೆ 8 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಸತ್ಪಾಲ್ ಮಹಾರಾಜ್, ಪ್ರೇಮ್ ಚಂದ್ ಅಗರ್ವಾಲ್, ಗಣೇಶ್ ಜೋಷಿ, ಧನ್ ಸಿಂಗ್ ರಾವತ್, ಸುಬೋಧ್ ಉನಿಯಾಲ್, ರೇಖಾ ಆರ್ಯ, ಚಂದನ್ ರಾಮ್ ದಾಸ್, ಸೌರಭ್ ಬಹುಗುಣ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries