ನವದೆಹಲಿ: ಕೊರೊನಾ ಸಾಂಕ್ರಾಮಿಕ ಹಿನ್ನೆಲೆ 2 ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮಾರ್ಚ್ 27 ರಿಂದ ಪುನರಾರಂಭಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸಿದ್ಧತೆ ನಡೆಸಿದೆ.
ಜಾಗತಿಕವಾಗಿ ಕೊರೊನಾ ಪ್ರಕರಣಗಳು ಹೆಚ್ಚಾಗತೊಡಗಿದಾಗ ಮಾರ್ಚ್ 23, 2020 ರಂದು ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಳಿಸಲಾಗಿತ್ತು.
ಡಿಸೆಂಬರ್ 15, 2021 ರಿಂದ ಕ್ರಮೇಣ ಪುನರಾರರಂಭಿಸುವುದಾಗಿ ಘೋಷಿಸಿತು. ಆದರೆ ಓಮಿಕ್ರಾನ್ ಕೋವಿಡ್ ರೂಪಾಂತರದ ಪ್ರಾರಂಭದಿಂದಾಗಿ ವಿಮಾನ ಹಾರಾಟ ದಿನಾಂಕವನ್ನು ಮುಂದೂಡಲಾಗಿತ್ತು.

