HEALTH TIPS

ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪಿಸಲು ಭಾರತದಿಂದ ಕ್ರಮ: ಅಮೆರಿಕ

          ವಾಷಿಂಗ್ಟನ್: ಜಮ್ಮು-ಕಾಶ್ಮೀರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಭಾರತ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅಮೆರಿಕದ ಹಿರಿಯ ರಾಯಭಾರಿ ಅಧಿಕಾರಿಯೊಬ್ಬರು ಅಮೆರಿಕದ ಸಂಸದರಿಗೆ ಮಾಹಿತಿ ನೀಡಿದ್ದಾರೆ.

         ಸೆನೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ದಕ್ಷಿಣ ಮತ್ತು ಸೆಂಟ್ರಲ್ ಏಷ್ಯಾದ ಸಹಾಯಕ ಕಾರ್ಯದರ್ಶಿ ಡೊನಾಲ್ಡ್ ಲು ಅವರು, "ಜಮ್ಮು-ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆಗಾಗಿ ಭಾರತ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

            ಅಲ್ಲದೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರದ ರಾಜಕಾರಣಿಗಳನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರದ ಸಚಿವರು ಹಲವು ಬಾರಿ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ' ಎಂದು ಹೇಳಿದರು.

          ಅಲ್ಲದೆ, ಭದ್ರತೆ ನಿಟ್ಟಿನಲ್ಲಿ ತಡೆ ಹಿಡಿಯಲಾಗಿದ್ದ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ಪುನಾರಂಭಿಸಲಾಗಿದೆ. ಭಯೋತ್ಪಾದಕ ದಾಳಿ ಸೇರಿದಂತೆ ಭದ್ರತೆಗೆ ಸಂಬಂಧಿಸಿದ ವಿಚಾರದಲ್ಲಿ ಅಮೆರಿಕ ಸಹ ತೀವ್ರ ನಿಗಾ ವಹಿಸಿದೆ. ಜಮ್ಮು-ಕಾಶ್ಮೀರದ ಗಡಿ ಮೂಲಕ ಭಾರತದ ಒಳನುಸುಳಿವಿಕೆ ಹೆಚ್ಚಾಗಿಯೇ ಇದೆ. ಆದರೆ, 2019ರಲ್ಲಿ 40 ಭಾರತೀಯ ಯೋಧರ ಸಾವಿಗೆ ಕಾರಣವಾದ ಪುಲ್ವಾಮಾ ದಾಳಿ ಬಳಿಕ ಉಗ್ರರ ಒಳನುಸುಳುವಿಕೆ ಘಟನೆಗಳು ಗಣನೀಯ ಪ್ರಮಾಣದಲ್ಲಿ ತಗ್ಗಿವೆ. ಜತೆಗೆ ಅಂತರರಾಷ್ಟ್ರೀಯ ಒತ್ತಡಕ್ಕೆ ಮಣಿದು, ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಕೈಗೊಂಡಿರುವ ಕ್ರಮಗಳು ಇದಕ್ಕೆ ಪೂರಕವಾಗಿದೆ ಎಂದು ಅವರು ತಿಳಿಸಿದರು.

            ಆದರೆ ಜಮ್ಮು-ಕಾಶ್ಮೀರದಲ್ಲಿ ಜನಸಾಮಾನ್ಯರ ಹಕ್ಕುಗಳಿಗೆ ಸವಾಲುಗಳಿವೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳೇ ನಡೆದಿಲ್ಲ. ಕಾಶ್ಮೀರ ಕಣಿವೆಯಲ್ಲಿ ಕೆಲ ಪ್ರಮುಖ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದು, ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries