ಕಾಸರಗೋಡು: 2022-23 ನೇ ಸಾಲಿನ ಜಿಲ್ಲಾ ಪಂಚಾಯತ್ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸೆಳೆಯುವ ಯೋಜನೆಗೆ 'ವಿಶ್ವ ಕಾಸರಗೋಡು ಮಹಾಸಭೆ' ವಿಶೇಷ ಹೆಸರಿರಿಸಿದೆ.
ರಯಿಸಿಂಗ್ ಕಾಸರಗೋಡ್- ಲ್ಯಾಂಡ್ ಆಫ್ ಇನ್ವಸ್ಟ್ ಮೆಂಟ್ ಎಂದು ಹೆಸರಿಸಲಾಗಿದೆ.
ಹಿಂದಿನ ಜಿಲ್ಲಾಧಿಕಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಡಾ.ಡಿ.ಸಜಿತ್ ಬಾಬು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕೆ.ಪ್ರದೀಪನ್, ಜಿಲ್ಲಾ ಪಂಚಾಯಿತಿ ಸದಸ್ಯರು, ಹೂಡಿಕೆದಾರರು ಉಪಸ್ಥಿತರಿದ್ದರು.




