ಕೊಚ್ಚಿ: ಭದ್ರತಾ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಪರವಾನಗಿ ನವೀಕರಣ ಮಾಡದಿರುವುದನ್ನು ಪ್ರಶ್ನಿಸಿ ಮೀಡಿಯಾ ಒನ್ ಚಾನೆಲ್ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇದರೊಂದಿಗೆ ಮೀಡಿಯಾ ಒನ್ ಮೇಲಿನ ನಿಷೇಧ ಮುಂದುವರಿಯಲಿದೆ. ಪ್ರಸಾರ ಪುನರಾರಂಭಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಏಕ ಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಎತ್ತಿ ಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಮಣಿಕುಮಾರ್ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಕ್ರಮದಲ್ಲಿ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ಏಕ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ಗುಪ್ತಚರ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಚಾನೆಲ್ ನ ಪ್ರಸಾರ ನಿಷೇಧಿಸಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸರ್ಕಾರಿ ವಕೀಲರು ಮುಚ್ಚಿದ ಲಕೋಟೆಯಲ್ಲಿ ವಿಭಾಗೀಯ ಪೀಠದ ಮುಂದೆ ಸಲ್ಲಿಸಿದರು. ವಿವರಗಳನ್ನು ಪರಿಶೀಲಿಸಿದ ಏಕ ಪೀಠ ಆದೇಶವನ್ನು ಎತ್ತಿ ಹಿಡಿದಿದೆ. ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದ ನಂತರ, ಮೀಡಿಯಾ ಒನ್ ಚಾನೆಲ್ ಇನ್ನು ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಬಹುದು.




