ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತಮ್ಮ ಸುಧೀರ್ಘ ಸೇವೆಯಿಂದ ನಿವೃತ್ತರಾಗುತ್ತಿರುವ ಪ್ರಾಂಶುಪಾಲ ಎಸ್.ಗೋಪಾಲಕೃಷ್ಣ ಭಟ್ ಇವರ ವಿದಾಯಕೂಟ ಸಮಾರಂಭ ಶಾಲೆಯ ಶ್ರೀ ನಾರಾಯಣಿ ಯಂ ಸಭಾಭವನದಲ್ಲಿ ಜರಗಿತು.
ಕಾಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿ ಪ್ರೇಮಾ ಕೆ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ಜಿಲ್ಲಾ ವಿದ್ಯಾಧಿಕಾರಿ ನಂದಿಕೇಶನ್, ಮೀಂಜ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಅಕ್ಷಯ್ ಕುಮಾರ್ ಎಲಿಯಾಣ ಉಪಸ್ಥಿತರಿದ್ದು ಶುಭಹಾರೈಸಿದರು. ಶಾಲಾ ಪಿ.ಟಿ.ಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಎಂ.ಪಿ.ಟಿ.ಎ ಅಧ್ಯಕ್ಷೆ ಲಲಿತಾ, ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್, ರಮೇಶ್ ಕೆ.ಎನ್, ಶಿವಶಂಕರ ಭಟ್, ವಾರ್ಡ್ ಸದಸ್ಯೆ ರುಖಿಯ ಸಿದ್ಧಿಕ್, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ, ಬ್ಲಾಕ್ ಪಂಚಾಯತಿ ಸದಸ್ಯ ಕೆ.ವಿ ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪ್ಲಸ್ ಟು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದಿ.ಕಾನ ನಾರಾಯಣ ಭಟ್ಟ ಮತ್ತು ದಿ.ಗೌರಿ ಅಮ್ಮ ಇವರ ಸ್ಮರಣಾರ್ಥ ಹಾಗೂ ದಿ.ತೊಟ್ಟೆತ್ತೋಡಿ ನಾರಾಯಣ ಭಟ್ಟ ಮತ್ತು ದಿ.ಕೇಶವ ಭಟ್ಟ ಇವರ ಸ್ಮರಣಾರ್ಥ ನೀಡಲಾಗುವ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಗೌರವಿಸಲಾಯಿತು. ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿದರು. ಕಿರಣ್ ಕೆ.ಎಸ್. ವಂದಿಸಿದರು.

.jpg)
