ಕೊಚ್ಚಿ: ನಟ ದಿಲೀಪ್ ಕೂಡ ಆರೋಪಿಯಾಗಿರುವ 2017ರ ನಟಿ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗೆ ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಪ್ರಕರಣದ ಪ್ರಮುಖ ಆರೋಪಿ 'ಪಲ್ಸರ್ ಸುನಿ' ಎಂದು ಕರೆಯಲ್ಪಡುವ ಸುನೀಲ್ ಎನ್‌ಎಸ್‌ಗೆ ಜಾಮೀನು ನೀಡಲು ನ್ಯಾಯಮೂರ್ತಿ ಪಿವಿ ಕುಂಞಿಕೃಷ್ಣನ್ ನಿರಾಕರಿಸಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ನಟಿಸಿರುವ ಸಂತ್ರಸ್ತ ನಟಿಯನ್ನು 2017ರ ಫೆಬ್ರವರಿ 17ರ ರಾತ್ರಿ ಬಲವಂತವಾಗಿ ಆಕೆಯನ್ನು ಅಪಹರಿಸಿ ಎರಡು ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣ ಸಂಬಂಧ 10 ಆರೋಪಿಗಳ ಪೈಕಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ನಂತರ ದಿಲೀಪ್ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.





