ತಿರುವನಂತಪುರ: ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಇಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಸೋಮವಾರ ಎದೆನೋವಿನಿಂದ ಮೃತಪಟ್ಟಿದ್ದಾರೆ.
0
samarasasudhi
ಮಾರ್ಚ್ 02, 2022
ತಿರುವನಂತಪುರ: ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಇಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಸೋಮವಾರ ಎದೆನೋವಿನಿಂದ ಮೃತಪಟ್ಟಿದ್ದಾರೆ.
ತಿರುವನಂತಪುರದ ನೆಲ್ಲಿಯೋಡ್ ನಿವಾಸಿ ಸುರೇಶ್ ಕುಮಾರ್ (40) ಮೃತಪಟ್ಟವರು.
ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಸುರೇಶ್ ಕುಮಾರ್ ಹಾಗೂ ಇತರ ನಾಲ್ವರ ವಿರುದ್ಧ ತಿರುವಲ್ಲ ಪೊಲೀಸರು ಪ್ರಕರಣ ದಾಖಲಿಸಿ, ವಶಕ್ಕೆ ಪಡೆದಿದ್ದರು.
'ಎದೆನೋವು ಕಾಣಿಸಿಕೊಂಡ ಕಾರಣ ಸುರೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ವಶದಲ್ಲಿದ್ದ ಸುರೇಶ್‌ಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿರುವ ಸ್ಥಳೀಯರು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.