HEALTH TIPS

ಇ-ಮಾರ್ಕೆಟ್‌ಪ್ಲೇಸ್‌ ಖರೀದಿ ಸಾಧನೆ: ಪ್ರಧಾನಿ ಶ್ಲಾಘನೆ

             ನವದೆಹಲಿ: ಕೇಂದ್ರ ಸರ್ಕಾರದ ಆನ್‌ಲೈನ್ ಖರೀದಿ ವೇದಿಕೆಯಾಗಿರುವ 'ಇ-ಮಾರ್ಕೆಟ್‌ಪ್ಲೇಸ್‌' ಒಂದೇ ವರ್ಷದಲ್ಲಿ ₹ 1 ಲಕ್ಷ ಕೋಟಿ ಮೊತ್ತದ ಪರಿಕರ ಖರೀದಿ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

             ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳಿಗೆ ಅಗತ್ಯವಿರುವ ಪರಿಕರಗಳನ್ನು ಆನ್‌ಲೈನ್ ಮೂಲಕ ಖರೀದಿಸಲು 'ಇ-ಮಾರ್ಕೆಟ್‌ಪ್ಲೇಸ್‌'ಗೆ 2016ರ ಆಗಸ್ಟ್‌ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು.

            ಈ ಪೋರ್ಟಲ್‌ನಲ್ಲಿ ₹ 1 ಲಕ್ಷ ಕೋಟಿ ಮೊತ್ತದ ಖರೀದಿ ವಹಿವಾಟು ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಗಣನೀಯ ಏರಿಕೆಯಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಶೇ 57ರಷ್ಟು ಖರೀದಿ ಸಣ್ಣ, ಅತಿ ಸಣ್ಣ ಉದ್ದಿಮೆಗಳಿಂದ ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries