ಕಾಸರಗೋಡು: ಕಾಸರಗೋಡು ಜಿಲ್ಲಾ ಮಾಹಿತಿ ಕಛೇರಿ ಸಿದ್ಧಪಡಿಸಿದ ಅಭಿವೃದ್ಧಿ ಕಿರುಚಿತ್ರಗಳ ಪ್ರದರ್ಶನವನ್ನು ಪುರಾತತ್ವ ಮತ್ತು ವಸ್ತುಸಂಗ್ರಹಾಲಯಗಳ ಇಲಾಖೆ ಸಚಿವ ಅಹ್ಮದ್ ದೇವರಕೋವಿಲ್ ಉದ್ಘಾಟಿಸಿದರು.
ಸಂಸದ ರಾಜಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ.ನೆಲ್ಲಿಕುನ್ನು, ಎ.ಕೆ.ಎಂ.ಅಶ್ರಫ್, ಸಿ.ಎಚ್.ಕುಂಞಂಬು, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷಾಧಿಕಾರಿ ಇ.ಪಿ.ರಾಜಮೋಹನ್, ಪ್ರೆಸ್ ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ, ಕಾರ್ಯದರ್ಶಿ ಕೆ.ವಿ.ಪದ್ಮೇಶ್ ಉಪಸ್ಥಿತರಿದ್ದರು.




