ನವದೆಹಲಿ: 60 ವರ್ಷದೊಳಗಿನವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
0
samarasasudhi
ಮಾರ್ಚ್ 22, 2022
ನವದೆಹಲಿ: 60 ವರ್ಷದೊಳಗಿನವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ರಾಜ್ಯಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಲಸಿಕೆ ವಿಚಾರದಲ್ಲಿ ನಾನಾ ದೇಶಗಳು ವಿದೇಶಿ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸುತ್ತಿವೆ.
ಪ್ರಯಾಣಿಕರ ಹಿತದೃಷ್ಟಿಯಿಂದ 60 ವರ್ಷದೊಳಗಿನವರಿಗೆ 3ನೇ ಡೋಸ್ ಪಡೆಯುವುದರ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕೆಂದು ಆರೋಗ್ಯ ಸಚಿವರನ್ನು ಪ್ರಿಯಾಂಕ ಚತುರ್ವೇದಿ ಒತ್ತಾಯಿಸಿದರು.