ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮ ಮತ್ತು ಉಪದೇವತೆಗಳಿಗೆ ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ ಅವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಶುಕ್ರವಾರ ಬೆಳಗ್ಗೆ ನಡೆಯಿತು.
ಬೆಳಗ್ಗೆ ಅಭಿಷೇಕ, ಗಣಪತಿ ಹೋಮ, ನಾಗಪ್ರತಿಷ್ಠೆ, ಆಷ್ಲೇಶ ಬಲಿ ನಂತರ ಕಲಶಾಭಿಷೇಕ ಜರಗಿತು. ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಳಿಕ ಮಹಾಪೂಜೆ, ದರ್ಶನ ಸೇವೆ, ಪ್ರಸಾದ ವಿತರಣೆ, ಮಹಾನ್ನ ಸಂತರ್ಪಣೆ ಜರಗಿತು.

