HEALTH TIPS

Cyclone Asani: ಅಂಡಮಾನ್‌ನಲ್ಲಿ ಗಾಳಿ ಸಹಿತ ಮಳೆ, ಜನರ ಸ್ಥಳಾಂತರ

              ಪೋರ್ಟ್ ಬ್ಲೇರ್: ಅಂಡಮಾನ್ ನಿಕೋಬರ್ ದ್ವೀಪಕ್ಕೆ ಚಂಡಮಾರುತ ಆಸನಿ ಸಮೀಪಿಸುತ್ತಿದ್ದಂತೆ ಭಾನುವಾರ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

                  ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಅಂಡಮಾನ್, ಚೆನ್ನೈ ಹಾಗೂ ವಿಶಾಖಪಟ್ಟಣದಲ್ಲಿ ಹಡಗು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರ್ಷದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

                ದ್ವೀಪದ ವಿವಿಧ ಭಾಗಗಳಲ್ಲಿ ಆರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸುಮಾರು 150 ಸಿಬ್ಬಂದಿ ನಿಯೋಜಿಸಲಾಗಿದೆ.

ಪೋರ್ಟ್ ಬ್ಲೇರ್ ಸೇರಿದಂತೆ ಉತ್ತರ, ಮಧ್ಯ ಮತ್ತು ದಕ್ಷಿಣ ಅಂಡಮಾನ್‌ನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಪೋರ್ಟ್ ಬ್ಲೇರ್‌ನಲ್ಲಿ 68 ಮತ್ತು ದಿಗ್ಲಿಪುರ್‌ನಲ್ಲಿ 25 ಎನ್‌ಡಿಆರ್‌‍ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries