ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರಕಾರವು ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಅನ್ನು ಪೂರೈಸುವುದಾಗಿ ಘೋಷಿಸಿದೆ ಎಂದು ರಾಜ್ಯದ ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ತಿಳಿಸಿದೆ.
0
samarasasudhi
ಏಪ್ರಿಲ್ 16, 2022
ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರಕಾರವು ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಅನ್ನು ಪೂರೈಸುವುದಾಗಿ ಘೋಷಿಸಿದೆ ಎಂದು ರಾಜ್ಯದ ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ತಿಳಿಸಿದೆ.
ರಾಜ್ಯದಲ್ಲಿ ಭಗವಂತ್ ಮಾನ್ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಶನಿವಾರ ಒಂದು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ.
ರಾಜ್ಯದ ಜನತೆಗೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ನೀಡುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಂಗಳವಾರ ಹೇಳಿಕೆ ನೀಡಿದ್ದರು.
"ನಮ್ಮ ನಾಯಕ ಮತ್ತು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇವೆ. ಶೀಘ್ರದಲ್ಲೇ, ಪಂಜಾಬ್ ಜನರಿಗೆ ಒಳ್ಳೆಯ ಸುದ್ದಿ ನೀಡುತ್ತೇನೆ" ಎಂದು ಮಾನ್ ಮಂಗಳವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಪಂಜಾಬ್ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ.