HEALTH TIPS

ಅಫ್ಘಾನಿಸ್ತಾನ: ಕಾಬೂಲ್‌ ಮಸೀದಿಯಲ್ಲಿ ಬಾಂಬ್‌ ಸ್ಫೋಟ, 10 ಸಾವು

           ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶುಕ್ರವಾರ ಮತ್ತೆ ದೊಡ್ಡ ಸ್ಫೋಟ ಸಂಭವಿಸಿದ್ದು, ಸುನ್ನಿ ಮಸೀದಿಯೊಂದರಲ್ಲಿ ಪ್ರಬಲ ಬಾಂಬ್‌ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

             ಪ್ರಾಥಮಿಕ ವರದಿಗಳ ಪ್ರಕಾರ, ಪಶ್ಚಿಮ ಕಾಬೂಲ್‌ನ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದ್ದಾರೆ.

             ಮುಸ್ಲಿಮರ ಪವಿತ್ರ ತಿಂಗಳ ರಂಜಾನ್ ನ ಕೊನೆಯ ಶುಕ್ರವಾರದಂದು ಪ್ರಾರ್ಥನೆ ಸಲ್ಲಿಸಲು ಖಲೀಫಾ ಸಿಹಿಬ್ ಮಸೀದಿಯಲ್ಲಿ ಹೆಚ್ಚು ಜನ ಸೇರಿದ್ದಾಗ ಈ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

               ಈ ಸ್ಫೋಟದ ಹೊಣೆಯನ್ನು ಇನ್ನೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಬಹುತೇಕ ಸ್ಫೋಟಗಳ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್ ಸಂಘಟನೆ ಹೊತ್ತುಕೊಂಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries