ನವದೆಹಲಿ: ಸಿಪಿಐ(ಎಂ)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಭಾನುವಾರ ಆಯ್ಕೆಯಾಗಿದ್ದಾರೆ. ಅವರು ಮೂರನೇ ಅವಧಿಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ವಿಶೇಷ.
0
samarasasudhi
ಏಪ್ರಿಲ್ 10, 2022
ನವದೆಹಲಿ: ಸಿಪಿಐ(ಎಂ)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಭಾನುವಾರ ಆಯ್ಕೆಯಾಗಿದ್ದಾರೆ. ಅವರು ಮೂರನೇ ಅವಧಿಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ವಿಶೇಷ.
ಪಕ್ಷದ ಪಾಲಿಟ್ ಬ್ಯೂರೋ ಸದಸ್ಯರಾಗಿದ್ದ ಸೀತಾರಾಂ ಅವರನ್ನು 2015ರಲ್ಲಿ ನಡೆದ ಪಕ್ಷದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.
ಪಾಲಿಟ್ ಬ್ಯೂರೋ ಕೇಂದ್ರ ಸಮಿತಿ ಸಭೆಯಲ್ಲಿ ಸೀತಾರಾಂ ಯೆಚೂರಿ ಅವರನ್ನು ಮೂರನೇ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ದವಲೆ ಹಾಗೂ ರಾಮಚಂದ್ರ ದೊಮೆ ಅವರ ಹೆಸರುಗಳು ಕೇಳಿಬಂದಿದ್ದವು.
ಈ ಹಿಂದೆ ಪ್ರಕಾಶ್ ಕಾರಟ್ ಕೂಡ ಎರಡು ಸಲ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಿದ್ದರು. ಅವರು 2005 ರಿಂದ 2015ರವರೆಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು.