HEALTH TIPS

ಚೀನಾ ಮೂಲದ ಶಿಯೋಮಿ ಕಂಪನಿಯ ₹5,551 ಕೋಟಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

           ನವದೆಹಲಿ: ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಹಾಗೂ ಕಾನೂನುಬಾಹಿರ ಹಣ ವರ್ಗಾವಣೆಯಲ್ಲಿ ತೊಡಗಿದ ಆರೋಪದಡಿ ಜಾರಿ ನಿರ್ದೇಶನಾಲಯವು (ಇ.ಡಿ) ಚೀನಾ ಮೂಲದ ಶಿಯೋಮಿ ಇಂಡಿಯಾ ಕಂಪನಿಯ ಸುಮಾರು ₹5,551 ಕೋಟಿ ಹಣವನ್ನು ಜಪ್ತಿ ಮಾಡಿದೆ.

           ಶನಿವಾರ ದೆಹಲಿ ಸೇರಿದಂತೆ ಶಿಯೋಮಿ ಕಂಪನಿಯ ವಿವಿಧ ಬ್ಯಾಂಕಿಂಗ್ ವಹಿವಾಟುಗಳನ್ನು ಪರಿಶೀಲನೆ ನಡೆಸಿ ಇ.ಡಿ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಶಿಯೋಮಿ ಭಾರತದಲ್ಲಿ ಮೊಬೈಲ್, ಸ್ಮಾರ್ಟ್‌ ಫೋನ್‌ ಸೇರಿದಂತೆ ವಿವಿಧ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಬಿಡಿ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿದೆ.

            ವಿದೇಶಿ ವಿನಿಯಮ ನಿಯಂತ್ರಣ ಕಾಯ್ದೆ 1999 ಅಡಿ ಈ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ. ಶಿಯೋಮಿ ಜೊತೆ ಸಂಪರ್ಕ ಹೊಂದಿರುವ ವಿದೇಶದ ಮೂರು ಕಂಪನಿಗಳಿಗೆ ಶಿಯೋಮಿ ಇಂಡಿಯಾ ಭಾರೀ ಪ್ರಮಾಣದಲ್ಲಿ ಹಣ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಇ.ಡಿ ಕಳೆದ ಫೆಬ್ರವರಿಯಲ್ಲಿ ವಿಚಾರಣೆ ಆರಂಭಿಸಿತ್ತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries