ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇತ್ತೀಚೆಗೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
0
samarasasudhi
ಏಪ್ರಿಲ್ 28, 2022
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇತ್ತೀಚೆಗೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪುಲ್ವಾಮಾದ ಮಿತ್ರಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಪುಲ್ವಾಮಾ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದರು.
'ಶೋಧ ಕಾರ್ಯಾಚರಣೆ ವೇಳೆ ಉಗ್ರರು ಪೊಲೀಸರ ಮೇಲೇ ಗುಂಡಿನ ದಾಳಿ ನಡೆಸಿದ್ದರು. ಬಳಿಕ, ಶೋಧ ಕಾರ್ಯಚರಣೆ ತಂಡ ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ'ಎಂದು ಪೊಲೀಸರು ತಿಳಿಸಿದ್ದಾರೆ.
'ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ'ಎಂದು ಪೊಲೀಸರು ತಿಳಿಸಿದ್ದಾರೆ. ಹತರಾದ ಉಗ್ರರನ್ನು ಅಲ್ ಬದರ್ ಸಂಘಟನೆಗೆ ಸೇರಿದ ದಲಿಪೊರಾದ ಇಜಾಜ್ ಹಫೀಜ್, ದೀರಿ ಮುರಾನ್‌ನ ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದೆ.
ಹತರಾದ ಉಗ್ರರು ಕಣಿವೆಯಲ್ಲಿ ಪೊಲೀಸರು, ನಾಗರಿಕರ ಮೇಲೆ ದಾಳಿ ಸೇರಿದಂತೆ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಉಗ್ರಗಾಮಿ ಸಂಘಟನೆಗೆ ಸೇರಿದವರಾಗಿದ್ದಾರೆ. .