ಕಾಸರಗೋಡು: ಕೇರಳ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಕುಂದುಕೊರತೆ ಪರಿಹಾರ ಅದಾಲತ್ ಮೇ 27 ಮತ್ತು 28 ರಂದು ಕಾಸರಗೋಡು ನಗರಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭ ಪ್ರಸಕ್ತ ಇರುವ ಕುಂದುಕೊರತೆಗಳ ಬಗ್ಗೆ ತೀರ್ಮಾನಿಸಲಿದೆ.
ಆಯೋಗದ ಅಧ್ಯಕ್ಷ ಮಾವೋಜಿ ಐಎಎಸ್ (ನಿವೃತ್ತ), ಸದಸ್ಯ ಎಸ್.ಅಜಯಕುಮಾರ್ (ಎಕ್ಸ್ ಎಂಪಿ) ಅದಾಲತ್ ಮುನ್ನಡೆಸುವರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಸಮಸ್ಯೆಗಳ ಕುರಿತು ಹಾಗೂ ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ದೂರುದಾರರ ಪ್ರಶ್ನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳುಉತ್ತರಿಸಲಿದ್ದಾರೆ. ಕುಂದುಕೊರತೆ ನಿವಾರಣಾ ನ್ಯಾಯಾಲಯ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಅಬಕಾರಿ ಇಲಾಖೆಯಲ್ಲಿ ಪೆÇಲೀಸ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಶಿಕ್ಷಣ ಇಲಾಖೆ, ಪಂಚಾಯತ್ ಇಲಾಖೆ, ಆರೋಗ್ಯ ಇಲಾಖೆ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಸಹಕಾರ ಇಲಾಖೆ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ 0471-2724554, 2580307, 2580312 ಎಂಬ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




