HEALTH TIPS

ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಕಲ್ಲು ತೂರಾಟ, ಪೊಲೀಸ್ ಅಧಿಕಾರಿಗೆ ಗಾಯ

            ನವದೆಹಲಿ: ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಕೋಮು ಘರ್ಷಣೆ ಸಂಭವಿಸಿದ ಬೆನ್ನಲ್ಲೇ ಸೋಮವಾರ ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ.

               ಶನಿವಾರದ ಘರ್ಷಣೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿಚಾರಣೆಗೆ ಕರೆದೊಯ್ದ ನಂತರ, ಆ ಪ್ರದೇಶದಲ್ಲಿ ಸುಮಾರು 50 ಮಹಿಳೆಯರು ಸೋಮವಾರ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

                   ಘರ್ಷಣೆ ವೇಳೆ ಗುಂಡು ಹಾರಿಸಿದ ಆರೋಪಿ ಸೋನು ಅವರ ಪತ್ನಿಯನ್ನು ಪೊಲೀಸರು ವಿಚಾರಣೆಗೆ ಕರೆದೊಯ್ಯುತ್ತಿದ್ದಂತೆ ವಿವಿಧ ಮನೆಗಳ ಮೇಲ್ಛಾವಣಿಯಿಂದ ಕಲ್ಲು ತೂರಾಟ ನಡೆದಿದೆ. ಈ ವೇಳೆ ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಗಾಯಗೊಂಡಿದ್ದಾರೆ.

                ಪ್ರಸ್ತುತ ತಲೆಮರೆಸಿಕೊಂಡಿರುವ ಸೋನು ಅವರನ್ನು ಹುಡುಕಲು ಪೊಲೀಸರು ಅವರ ಮನೆಗೆ ಹೋದಾಗ ಸೋನು ಕುಟುಂಬ ಸದಸ್ಯರು ಪೊಲೀಸರ ಮೇಲೆ ಕಲ್ಲು ತೂರಿದರು. ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವಾಯವ್ಯ ದೆಹಲಿಯ ಡೆಪ್ಯುಟಿ ಕಮಿಷನರ್ ಆಫ್ ಪೋಲಿಸ್ ತಿಳಿಸಿದ್ದಾರೆ.

                ವಾಯುವ್ಯ ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವಿನ ಘರ್ಷಣೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವಾರು ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.

             ಪೊಲೀಸರ ಪ್ರಕಾರ, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ನಡೆದ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆದಿದೆ ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ರಾತ್ರಿ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ಇದುವರೆಗೆ 23 ಮಂದಿಯನ್ನು ಬಂಧಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries