ಹೈದರಾಬಾದ್: ದಶಕದ ಹಿಂದೆ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣಗಳಲ್ಲಿ ಅವರನ್ನು ಇಲ್ಲಿನ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿದೆ.
0
samarasasudhi
ಏಪ್ರಿಲ್ 13, 2022
ಹೈದರಾಬಾದ್: ದಶಕದ ಹಿಂದೆ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣಗಳಲ್ಲಿ ಅವರನ್ನು ಇಲ್ಲಿನ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿದೆ.
ಸಂಸದರು, ಶಾಸಕರ ವಿಚಾರಣೆಗಾಗಿ ಇರುವ ವಿಶೇಷ ಸೆಷನ್ಸ್ ನ್ಯಾಯಾಲಯವು ಈ ತೀರ್ಪು ಪ್ರಕಟಿಸಿದೆ.
ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಅವರು 2012 ಡಿಸೆಂಬರ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭಗಳಲ್ಲಿ ದ್ವೇಷಭಾಷಣಗಳನ್ನು ಮಾಡಿದ್ದಾರೆ ಎನ್ನುವ ಆರೋಪ ಹೊಂದಿದ್ದರು. ಈ ಕಾರಣಕ್ಕಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.