ನವದೆಹಲಿ:ವಾಷಿಂಗ್ಟನ್‌ನಲ್ಲಿ ನಡೆದ ಅಮೆರಿಕದೊಂದಿಗಿನ 2+2 ಸಚಿವರ ಸಭೆಯಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಚರ್ಚಿಸಲಾಗಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
0
samarasasudhi
ಏಪ್ರಿಲ್ 14, 2022
ನವದೆಹಲಿ:ವಾಷಿಂಗ್ಟನ್‌ನಲ್ಲಿ ನಡೆದ ಅಮೆರಿಕದೊಂದಿಗಿನ 2+2 ಸಚಿವರ ಸಭೆಯಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಚರ್ಚಿಸಲಾಗಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಜೈಶಂಕರ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮೆರಿಕದ ಆಂಟೋನಿ ಬ್ಲಿಂಕೆನ್ ಹಾಗೂ ಲಾಯ್ಡ್ ಆಸ್ಟಿನ್ ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.
"ನಾವು ನಮ್ಮ ಭಾರತೀಯ ಪಾಲುದಾರರೊಂದಿಗೆ ಈ ಹಂಚಿತ ಮೌಲ್ಯಗಳ(ಮಾನವ ಹಕ್ಕುಗಳು) ಬಗ್ಗೆ ಆಗಾಗ ಮಾತನಾಡುತ್ತೇವೆ, ಈ ನಿಟ್ಟಿನಲ್ಲಿ ಭಾರತದಲ್ಲಿ ಇತ್ತೀಚೆಗೆ ಕೆಲ ಸರಕಾರ, ಪೊಲೀಸ್ ಮತ್ತು ಕಾರಾಗೃಹ ಅಧಿಕಾರಿಗಳಿಂದ ಹೆಚ್ಚುತ್ತಿರುವ ಮಾನವ ಹಕ್ಕು ಉಲ್ಲಂಘನೆಗಳನ್ನು ನಾವು ಅವಲೋಕಿಸುತ್ತಿದ್ದೇವೆ,'' ಎಂದು ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ , ಜೈಶಂಕರ್' 2+2 ಸಚಿವರ ಸಭೆಯಲ್ಲಿ ಚರ್ಚೆಗಳು "ರಾಜಕೀಯ-ಮಿಲಿಟರಿ ವ್ಯವಹಾರಗಳ" ಮೇಲೆ ಕೇಂದ್ರೀಕೃತವಾಗಿದ್ದವು. ಅಮೆರಿಕ ಸೇರಿದಂತೆ ಇತರ ದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಭಾರತವೂ ಅಭಿಪ್ರಾಯಗಳನ್ನು ಹೊಂದಿದೆ ''ಎಂದರು.