ತಿರುವನಂತಪುರಂ: ರಾಜ್ಯದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಮೂರು ಗಂಟೆಗಳಲ್ಲಿ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಆಲಪ್ಪುಳ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಗಂಟೆಗೆ 40 ಕಿ.ಮೀ. ವರೆಗಿನ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಅಲಪ್ಪುಳ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಮತ್ತು ಗುರುವಾರ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಇಂದು ಮಧ್ಯರಾತ್ರಿಯವರೆಗೂ ಕೇರಳ ಕರಾವಳಿಯಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆಗಳಿದ್ದು, ಮೀನುಗಾರರು ಎಚ್ಚರದಿಂದ ಇರುವಂತೆ ಕೇರಳ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.





