HEALTH TIPS

ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕ

           ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಈ ಮಾಸಾಂತ್ಯದೊಳಗೆ ಸೇವೆಯಿಂದ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. ಇದರೊಂದಿಗೆ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

            ಜನರಲ್ ಎಂ.ಎಂ. ನರವಣೆ ಅವರು ಮೂರು ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ ಡಿಸೆಂಬರ್ ನಲ್ಲಿ ಹೊಣೆ ವಹಿಸಿಕೊಂಡಿದ್ದರು. ಇದರಿಂದಾಗಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.

               ಕಳೆದ ವರ್ಷ ಡಿಸೆಂಬರ್ ನಲ್ಲಿ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ನಿಧನ ಹೊಂದಿದ್ದರು. ಅಂದಿನಿಂದ ಆ ಸ್ಥಾನ ಹಾಗೆಯೇ ಉಳಿದಿದ್ದು, ಜನರಲ್ ನರವಣೆ ಮುಂದಿನ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗುವ ಮಾತುಗಳು ಕೇಳಿಬರುತ್ತಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries