ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಳಿಯಾರ್ ಕುಟುಂಬಶ್ರೀ ಸಿಡಿಎಸ್ ನಲ್ಲಿ ಸಮಗ್ರ ಕೃಷಿ ಯೋಜನೆಯನ್ನು ಜಾರಿಗೊಳಿಸಿದೆ. ಕುಟುಂಬಶ್ರೀ ಜಿಲ್ಲಾ ಮಿಷನ್ ಮೂಲಕ ಇಎಲ್‍ಎ ಯೋಜನೆಯ ಮೂಲಕ ಪಾನೂರು ಗ್ರಾಮಶ್ರೀ ಇಂಟಿಗ್ರೇಟೆಡ್ ಫಾರ್ಮ್ ಅನ್ನು ಜಾರಿಗೊಳಿಸಲಾಗಿದೆ.
ಶಾಸಕ ಸಿ.ಎಚ್.ಕುಞಂಬು ಉದ್ಘಾಟಿಸಿದರು. ಮುಳಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ವಿ.ಮಿನಿ ಅಧ್ಯಕ್ಷತೆ ವಹಿಸಿದ್ದರು. ಕುಟುಂಬಶ್ರೀ ಜಿಲ್ಲಾ ಮಿಷನ್ ಸಹಾಯಕ ಸಂಯೋಜಕ ಸಿ.ಎಚ್.ಇಕ್ಬಾಲ್ ಯೋಜನೆ ವಿವರಿಸಿದರು. ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಇ.ಮೋಹನನ್, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಬಿ ಶಫೀಕ್, ಕುಟುಂಬಶ್ರೀ ಜಿಲ್ಲಾ ಮಿಷನ್ ಕೋ-ಆರ್ಡಿನೇಟರ್ ಟಿ.ಟಿ.ಸುರೇಂದ್ರನ್, ಮುಳಿಯಾರ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎ. ಜನಾರ್ದನನ್, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೈಸಾ ರಶೀದ್, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿಸಾ ಮನ್ಸೂರ್ ಮಲ್ಲತ್ ಹಾಗೂ ಸದಸ್ಯರು ಮಾತನಾಡಿದರು.




.jpeg)
