HEALTH TIPS

ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಪ್ರಕರಣ: ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

           ಇಂಫಾಲ: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 

            ಕಳೆದ ಮಂಗಳವಾರ ಶಾಸಕ ಮೇವಾನಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದ ಬಾರ್ಪೇಟಾ ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಸೆಷನ್ಸ್ ಕೋರ್ಟ್, 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಜಿಗ್ನೇಶ್ ಮೇವಾನಿ ಅವರು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

             ಮೇವಾನಿ ಪರ ವಕೀಲ ಅಂಗ್ಶುಮನ್ ಬೋರಾ ಅವರು ತಮ್ಮ ವಾದವನ್ನು ಮಂಡಿಸಿ, ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್‌ನ ಸಂಚಾಲಕರೂ ಆಗಿರುವ ಮೇವಾನಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು..

            ಪ್ರಧಾನಿ ನರೇಂದ್ರ ಮೋದಿ ವಿರುದ್ಧ “ಆಕ್ಷೇಪಾರ್ಹ” ಟ್ವೀಟ್ ಗೆ ಸಂಬಂಧಿಸಿದಂತೆ ವಡ್ಗಾಮ್ ಶಾಸಕ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಬಂಧಿಸಿದ್ದರು. ತದನಂತರ ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಸೇರಿದಂತೆ ವಿವಿಧ ಆರೋಪಗಳ ಮೇಲೆ ಏಪ್ರಿಲ್ 25 ರಂದು ಅಸ್ಸಾಂ ಪೊಲೀಸರು ಗುಜರಾತ್ ಶಾಸಕರನ್ನು ಮತ್ತೆ ಬಂಧಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries