ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್‌ಗೆ ಸೇರುತ್ತಾರೆಯೇ ಹಾಗೂ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಾತ್ರವೇನು ಎಂಬ ಕುರಿತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ನಿರ್ಧರಿಸುತ್ತಾರೆ ಎಂದು ಪ್ರಮುಖ ನಾಯಕರು ಇಂದು ಹೇಳಿದ್ದಾರೆಂದು NDTV ವರದಿ ಮಾಡಿದೆ.
0
samarasasudhi
ಏಪ್ರಿಲ್ 19, 2022
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್‌ಗೆ ಸೇರುತ್ತಾರೆಯೇ ಹಾಗೂ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಾತ್ರವೇನು ಎಂಬ ಕುರಿತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ನಿರ್ಧರಿಸುತ್ತಾರೆ ಎಂದು ಪ್ರಮುಖ ನಾಯಕರು ಇಂದು ಹೇಳಿದ್ದಾರೆಂದು NDTV ವರದಿ ಮಾಡಿದೆ.
ಸೋನಿಯಾ ಗಾಂಧಿ ಅವರು ನಿನ್ನೆ ಸಂಜೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗಿನ ಮಾತುಕತೆಯ ನಂತರ ಸೋನಿಯಾ ಅವರು ಮೂರು ದಿನಗಳಲ್ಲಿ ಎರಡನೇ ಬಾರಿಗೆ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾದರು. ರಾಹುಲ್ ಗಾಂಧಿ ಚರ್ಚೆಯಲ್ಲಿ ಭಾಗವಹಿಸಲಿಲ್ಲ.