ಕಾಸರಗೋಡು: ಕೇರಳ ಕೌನ್ಸಿಲ್ ಫಾರ್ ಸೈನ್ಸ್, ಟೆಕ್ನಾಲಜಿ ಅಂಡ್ ಎನ್ವಿರಾನ್‍ಮೆಂಟ್ (ಕೆಎಸ್‍ಸಿಎಸ್‍ಟಿಇ) ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಾರ್ಷಿಕವಾಗಿ ನಡೆಯುವ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆ ಮೇ 11ರಂದು ಕಾಸರಗೋಡಿನ ಎಲ್‍ಬಿಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿವಿಜ್ಞಾನಿಗಳು ಮತ್ತು ಎಂಜಿನಿಯರ್‍ಗಳ ಸಾಧನೆಗಳು ಮತ್ತು ಮಹೋನ್ನತ ಕೊಡುಗೆಗಳನ್ನು ಗುರುತಿಸಲು ಮತ್ತು ದೇಶಾದ್ಯಂತ ಶಾಲಾ ಕಾಲೇಜುಗಳು ಮತ್ತು ಇತರ ಸಂಸ್ಥೆಗಳಲ್ಲಿ ಯುವಜನರ ಮನಸ್ಸಿನಲ್ಲಿ ವೈಜ್ಞಾನಿಕ ಅರಿವು ಮೂಡಿಸಲು ಪ್ರತಿ ವರ್ಷ ಮೇ 11 ಅನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರದರ್ಶನಗಳು ಮತ್ತು ವಿಜ್ಞಾನ ಮೇಳಗಳಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ಹೊಂದಿರುತ್ತಾರೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 250290)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




