ನವದೆಹಲಿ: ಅಪರಾಧಿಗಳ ಮತ್ತು ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಪ್ರೊಸೀಜರ್ (ಗುರುತು) ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ.
ಕೇಂದ್ರ ಸರ್ಕಾರ ಈ ಕ್ರಿಮಿನಲ್ ಪ್ರೊಸೀಜರ್ ಐಡೆಂಟಿಫಿಕೇಷನ್ ಬಿಲ್-2022 ಅನ್ನು ಏಪ್ರಿಲ್ 4 ರಂದು ಲೋಕಸಭೆಯಲ್ಲಿ ಮತ್ತು ಏಪ್ರಿಲ್ 6 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಿತ್ತು. ಅದಕ್ಕೆ ರಾಷ್ಟ್ರಪತಿಗಳು ಏಪ್ರಿಲ್ 18 ರಂದು ಅಂಕಿತ ಹಾಕಿದ್ದು, ಮಸೂದೆ ಈಗ ಕಾನೂನು ರೂಪ ಪಡೆದುಕೊಂಡಿದೆ.
ಹೊಸ ಕಾನೂನಿಂದ ಬಂಧಿತ ವ್ಯಕ್ತಿಗೆ ಸಂಬಂಧಿಸಿದ ಎಲ್ಲಾ ರೀತಿಯ ಮಾಹಿತಿಯನ್ನು ಅಂದರೆ ರೆಟಿನಾ, ಪಾದದ ಗುರುತುಗಳು ಮತ್ತು ಬ್ರೈನ್ ಮ್ಯಾಪಿಂಗ್‌ನಿಂದ ಮಾಹಿತಿ ಸಂಗ್ರಹಿಸುವ ಅಧಿಕಾರ ಪೊಲೀಸರಿಗೆ ದೊರೆಯಲಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಪ್ರತಿಪಕ್ಷಗಳು ಹೇಳುತ್ತವೆ.




