ಕಾಸರಗೋಡು|: ದೇಶದ ಜನರಲ್ಲಿ ರಾಷ್ಟ್ರಭಕ್ತಿ ಹೆಚ್ಚಿಸಲು ಕಾರಣವಾಗಿರುವ ಸ್ವಾತಂತ್ರ್ಯ ಹೋರಾಟ ಮತ್ತು ಬಲಿದಾನದ ಬಗ್ಗೆ ಇಂದಿನ ಯುವಪೀಳಿಗೆಗೆ ಮನವರಿಕೆ ಮಾಡಿಕೊಡುವುದು ಅನಿವಾರ್ಯ ಎಂದು ಇಂಧನ ಮತ್ತು ಕನ್ನಡ ಸಂಸ್ಕøತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಅವರು ಕಾಸರಗೋಡು ಕೋಟೆಕಣಿ ರಸ್ತೆಯ ಜೀವಾಸ್ ಸಭಾಂಗಣದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಸರಗೋಡಿನ ಕನ್ನಡಿಗರ ಪಾತ್ರವನ್ನು ಜನತೆಗೆ ತಿಳಿಸುವ ನಿಟ್ಟಿನಲ್ಲಿ 'ಆಜಾದಿಕ ಆ ಅಮೃತ್ ಮಹೋತ್ಸವ್'ಹೆಸರಲ್ಲಿ ಮಲಯಾಳ ದಿನಪತ್ರಿಕೆ ಜನ್ಮಭೂಮಿ ಹಾಗೂ ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಸ್ವಾತಂತ್ರ್ಯ ಹೋರಾಟ ಮತ್ತು ಭಾಷಾ ಅಲ್ಪಸಂಖ್ಯಾತರು ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.
ಪತ್ರಕರ್ತ ಎಂ. ರಾಧಾಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿಅಭಿವೃದ್ದಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಚಿನ್ಮಯ ಮಿಶನ್ ಕೇರಳ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತೀ, ಕೇರಳ ಕೇಂದ್ರೀಯ ವಿಶ್ವ ವಇದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ. ಎಂ. ಮುರಳೀಧರನ್ ನಂಬ್ಯಾರ್ ಉಪಸ್ಥಿತರಿದ್ದರು. ಈ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರ ಕೆ.ಎಂ.ಕೆ ನಂಬ್ಯಾರ್ ಅವರನ್ನು ಸಚಿವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸ್ವಾಗತ ಸಮಿತಿ ಸಂಚಾಲಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ಶ್ರೀನಾಥ್ ಸ್ವಾಗತಿಸಿದರು. ಕಾಸರಗೋಡು ಸರ್ಕಾರಿ ಕಾಳೇಜು ಕನ್ನಡ ವಿಭಾಗ ಮುಖ್ಯಸ್ಥೆ ಸುಜಾತಾ ಎಸ್. ಕಾರ್ಯಕ್ರಮ ನಿರೂಪಿಸಿದರು. ಜನ್ಮಭೂಮಿ ಕಣ್ಣೂರು ಘಟಕ ಪ್ರಬಂಧಕ ಎಂ.ಎ ವಿಜಯನ್ ವಂದಿಸಿದರು. ಈ ಸಂದರ್ಭ ನಡೆದ ವಿಚಾರಗೋಷ್ಠಿಯಲ್ಲಿ ಡಾ. ರತ್ನಾಕರ ಮಲ್ಲಮೂಲೆ, ಪತ್ರಕರ್ತ ಮಲಾರ್ ಜಯರಾಂ ರೈ, ಕೇಂದ್ರೀಯ ವಿಶ್ವ ವಇದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪ್ರಶಾಂತ್ ಬಳ್ಳುಳ್ಳಾಯ ವಿವಿಧ ವಿಷಯಗಳ ಬಗ್ಗೆ ಪ್ರಬಂಧ ಮಂಡಿಸಿದರು.




