ಕಾಸರಗೋಡು: ಭಾಷಾ ಅಲ್ಪಸಂಖ್ಯಾಕ ಕನ್ನಡಿಗರ ವಿವಿಧ ಸಮಸ್ಯೆಗಳನ್ನು ಮುಂದಿರಿಸಿಕೊಂಡು ಇಂದು( ಎಪ್ರಿಲ್ 29 ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ವಿದ್ಯಾನಗರ ಜಿಲ್ಲಾಧಿಕಾರಿ ಕಚೇರಿ ಪರಿಸರದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.
ಧರಣಿ ಸತ್ಯಾಗ್ರಹವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸ್ಥಳೀಯ ಆಡಳಿತ ಸಂಸ್ಥೆಗಳ ಕನ್ನಡ ಜನಪ್ರತಿನಿಧಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿರುವರು.

