HEALTH TIPS

ಹಿಂದಿ ರಾಷ್ಟ್ರ ಭಾಷೆ ವಿವಾದದ ನಡುವೆಯೇ, ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ!

           ನವದೆಹಲಿ: ದೇಶಾದ್ಯಂತ ಹಿಂದಿ ರಾಷ್ಟ್ರ ಭಾಷೆಯ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿರುವಂತೆಯೇ ಇತ್ತ ಪ್ರಧಾನಿ ಮೋದಿ ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಕೆ ಪರ ಬ್ಯಾಟ್ ಬೀಸಿದ್ದಾರೆ.

          ಹೌದು... ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಬಲವಾದ ಒತ್ತಾಯ ಹೇರಿದ್ದು, ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುತ್ತಾರೆ ಎಂದು ಹೇಳಿದ್ದಾರೆ.

             ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, 'ನಾವು ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುವಂತೆ ಮಾಡುತ್ತದೆ ಎಂದು ಹೇಳಿದರು. 

            ಇದೇ ವೇಳೆ ನ್ಯಾಯ ವಿತರಣೆಯನ್ನು ಸುಲಭಗೊಳಿಸಲು ಹಳತಾದ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, '2015 ರಲ್ಲಿ, ನಾವು ಅಪ್ರಸ್ತುತವಾದ ಸುಮಾರು 1,800 ಕಾನೂನುಗಳನ್ನು ಗುರುತಿಸಿದ್ದೇವೆ. ಇವುಗಳಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ 1,450 ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಆದರೆ, ಅಂತಹ 75 ಕಾನೂನುಗಳನ್ನು ಮಾತ್ರ ರಾಜ್ಯಗಳು ರದ್ದುಪಡಿಸಿವೆ" ಎಂದು ಅವರು ಹೇಳಿದರು.

             ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿರುವಾಗ, ನ್ಯಾಯವು ಸುಲಭವಾಗಿ ದೊರೆಯುವ, ತ್ವರಿತವಾಗಿ ಮತ್ತು ಎಲ್ಲರಿಗೂ ನ್ಯಾಯಾಂಗ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

              "ನಮ್ಮ ದೇಶದಲ್ಲಿ, ನ್ಯಾಯಾಂಗದ ಪಾತ್ರವು ಸಂವಿಧಾನದ ರಕ್ಷಕನದ್ದಾಗಿದೆ, ಶಾಸಕಾಂಗವು ನಾಗರಿಕರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಇವೆರಡರ ಸಂಗಮವು ಪರಿಣಾಮಕಾರಿ ಮತ್ತು ಕಾಲಮಿತಿಯ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತದೆ ಎಂದು ನಾನು ನಂಬುತ್ತೇನೆ ಎಂದು ಅವರು ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries